ಶಾಲಾ ವಾರ್ಷಿಕೋತ್ಸವ
ನಮ್ಮ ಶಾಲೆಯ 2016-17ನೇ ಶೈಕ್ಷಣಿಕ ವರ್ಷದ ಶಾಲಾ ವಾರ್ಷಿಕೋತ್ಸವವು ತಾರೀಕು 18-11-2016 ನೇ ಶುಕ್ರವಾರ ಶಾಲಾ ಸಂಚಾಲಕಿ ರಾಜೇಶ್ವರಿ ಎಸ್. ರಾವ್ ಅವರು ಧ್ವಜರೋಹಣ ಮಾಡುವುದರ ಮೂಲಕ ಪ್ರಾರಂಭಗೊಂಡಿತು. ಮಧ್ಯಾಹ್ನ 2.30 ಗಂಟೆಗೆ ಸರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆರಂಭಗೊಂಡಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಗಳಾದ ನಂದಿಕೇಶನ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಜಿ.ಎಚ್.ಎಸ್.ಎಸ್ ಅಂಗಡಿಮೊಗರು ಶಾಲೆಯ ಮುಖ್ಯ ಶಿಕ್ಷಕರಾದ ಅಶೋಕ ಬಾಡೂರು ಆಗಮಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕಿ ರಾಜೇಶ್ವರಿ ಎಸ್.ರಾವ್ ,ಶಾಲಾ ಮುಖ್ಯ ಶಿಕ್ಷಕರಾದ ಸುಧಾಕರ.ವಿ , ಪಿ.ಟಿ.ಎ ಅಧ್ಯಕ್ಷರಾದ ಥಾಮಸ್ ಡಿ'ಸೋಜಾ, ಎಂ.ಪಿ.ಟಿ.ಎ ಅಧ್ಯಕ್ಷೆ ಸ್ವಪ್ನಾ.ಪಿ, ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್ ರಾವ್ ಮತ್ತು ನಿವೃತ ಉಪಜಿಲ್ಲಾ ವಿದ್ಯಾಧಿಕಾರಿಗಳಾದ ನಾರಾಯಣ ರಾವ್ ಉಪಸ್ಥಿತರಿದ್ದರು. ಅಧ್ಯಾಪಕರಾದ ಹರೀಶ್ ಸುಲಾಯ ನಿರೂಪಿಸಿ,ನಾರಾಯಣ.ಯು ವಂದಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮುಂದುವರಿಯಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ರಾಮಚಂದ್ರ ಕೆ.ಎಂ ನಿರ್ವಹಿಸಿದರು.
Comments
Post a Comment