ಜಾಗ್ರತೋತ್ಸವ ಕಾರ್ಯಕ್ರಮ
ತಾರೀಕು 12-06-2018 ನೇ ಮಂಗಳವಾರ ನಮ್ಮ ಶಾಲೆಯಲ್ಲಿ ಜಾಗ್ರತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಮಿಂಜಾ ಪ್ರಾಥಮಿಕ ಅರೋಗ್ಯ ಕೇಂದ್ರದ ವೈಧ್ಯಾಧಿಕಾರಿಯಾದ ಡಾI ಪ್ರಭಾಕರ್ ರೈ ಇವರು ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರದ ಅಧಿಕಾರಿಯಾದ ಸುನಿಲ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ.ವಿ ಉಪಸ್ಥಿತರಿದ್ದರು. ಇದೇ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ಜಾಗ್ರತೋತ್ಸವದ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕರಾದ ಅರವಿಂದಾಕ್ಷ ಭಂಡಾರಿ ಸ್ವಾಗತಿಸಿ,ನಿರೂಪಿಸಿದರು. ಶಾಲಾ ಅಧ್ಯಾಪಕರಾದ ಮಹಾಭಲೇಶ್ವರ ಭಟ್ ವಂದಿಸಿದರು.
Comments
Post a Comment