ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ
ವಿದ್ಯಾವರ್ಧಕ ಎ. ಯು.ಪಿ ಶಾಲೆ ಮೀಯಪದವಿನಲ್ಲಿ 2018-19ನೇ ಶೈಕ್ಷಣಿಕ ವರ್ಷದ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷರಾದ ತಿಮ್ಮಪ್ಪ ಭಟ್ ವಹಿಸಿದ್ದರು.ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಲಹೆಗಾರರದ ಶ್ರೀಧರ ರಾವ್ ಆರ್.ಎಂ ,ಶಾಲಾ ಎಂ.ಪಿ.ಟಿ.ಎ ಅಧ್ಯಕ್ಷೆ ಝೀನತ್ ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ ವಿ ಕಾರ್ಯಕ್ರಮವನ್ನು ಸ್ವಾಗತಿಸಿ, ಪ್ರಾಸ್ತಾವಿಕ ಭಾಷಣ ಗೈದರು.ಇದೇ ಸಂಧರ್ಭದಲ್ಲಿ ಹಲೋ ಇಂಗ್ಲಿಷ್ ಕಾರ್ಯಕ್ರಮವನ್ನು ತಿಮ್ಮಪ್ಪ ಭಟ್ ಇವರು ಉದ್ಘಾಟಿಸಿದರು.ಹೆತ್ತವರಿಗೆ ಹಲೋ ಇಂಗ್ಲಿಷ್ ಕಾರ್ಯಕ್ರಮದ ಬಗ್ಗೆ ಶಾಲಾ ಅಧ್ಯಾಪಕರಾದ ಸುನಿಲ್ ಕುಮಾರ್ ಮಾಹಿತಿ ನೀಡಿದರು.ನಂತರ ಈ ವರ್ಷ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.2018-19ನೇ ಸಾಲಿನ ನೂತನ ಪಿ.ಟಿ.ಎ ಅಧ್ಯಕ್ಷರಾಗಿ ತಿಮ್ಮಪ್ಪ ಭಟ್ ,ಉಪಾಧ್ಯಕ್ಷರಾಗಿ ಚಂದ್ರಶೇಖರ್,ಎಂ.ಪಿ.ಟಿ.ಎ ಅಧ್ಯಕ್ಷೆಯಾಗಿ ಸೌಮ್ಯ ಪ್ರಕಾಶ್ ಹಾಗೂ ಉಪಾಧ್ಯಕ್ಷೆಯಾಗಿ ಸ್ವಪ್ನ.ಪಿ ಆಯ್ಕೆಯಾದರು.ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕರಾದ ಅರವಿಂದಾಕ್ಷ ಭಂಡಾರಿ ನಿರೂಪಿಸಿದರು.ಶಾಲಾ ಅಧ್ಯಾಪಕಿ ಅನುರಾಧ ಎಂ.ಕೆ ಧನ್ಯವಾದವನ್ನಿತ್ತರು.
Comments
Post a Comment