ವಿದ್ಯಾವರ್ಧಕ ಎ.ಯು.ಪಿ ಶಾಲೆಯಲ್ಲಿ ಲ್ಯಾಪ್ ಟಾಪ್ ಉದ್ಘಾಟನೆ
ಮೀಯಪದವು: ವಿದ್ಯಾವರ್ಧಕ ಎ.ಯು.ಪಿ ಶಾಲೆ ಮೀಯಪದವಿನಲ್ಲಿ ಸರಕಾರದಿಂದ ದೊರೆತ 14 ಲ್ಯಾಪ್ ಟಾಪ್ ಹಾಗೂ 5 ಪ್ರೊಜೆಕ್ಟರ್ ಗಳ ಉದ್ಘಾಟನಾ ಕಾರ್ಯಕ್ರಮ ಶಾಲಾ ಗ್ರಂಥಾಲಯದಲ್ಲಿ ಜರಗಿತು.ಕಾರ್ಯಕ್ರಮವನ್ನು ಮಿಂಜಾ ಗ್ರಾಮ ಪಂಚಾಯತ್ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಕಮಿಟಿ ಮುಖ್ಯಸ್ಥರಾದ ಶ್ರೀಯುತ ಕೃಷ್ಣ ಇವರು ಉದ್ಘಾಟಿಸಿದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಂಜೇಶ್ವರ ಬಿ.ಪಿ.ಓ ಶ್ರೀ ವಿಜಯಕುಮಾರ್.ಪಿ ಆಗಮಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿಟಿಎ ಅಧ್ಯಕ್ಷರಾದ ಶ್ರೀ ಕೃಷ್ಣ ಪ್ರಸಾದ್ ವಹಿಸಿದ್ದರು. ಶಾಲಾ ಆಡಳಿತ ಸಲಹೆಗಾರರಾದ ಶ್ರೀಯುತ ಶ್ರೀಧರ್. ಆರ್.ಎಂ,ಶಾಲಾ ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಕೈರುನಿಸ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಶಾಲಾ ಪಿ.ಟಿ.ಎ ಹಾಗೂ ಎಂ.ಪಿ.ಟಿ.ಎ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ.ವಿ ಸ್ವಾಗತಿಸಿ, ಶಾಲಾ ಯು.ಪಿ ಎಸ್.ಆರ್.ಜಿ ಕನ್ವಿನರ್ ರಘುವೀರ್ ರಾವ್ ವಂದಿಸಿದರು.ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕರಾದ ಅರವಿಂದಾಕ್ಷ ಭಂಡಾರಿ ನಿರೂಪಿಸಿದರು.ಶಾಲಾ ಅಧ್ಯಾಪಕರಾದ ಕೃಷ್ಣ ಶರ್ಮ.ಕೆ ಹಾಗೂ ಮಹಾಬಲೇಶ್ವರ ಭಟ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
Comments
Post a Comment