ದಿ. ಯಂ ರಾಮಕೃಷ್ಣ ರಾವ್ ಸಂಸ್ಮರಣೆ ಮತ್ತು ಸನ್ಮಾನ ಕಾರ್ಯಕ್ರಮ
ಶಾಲಾ ಸಂಚಾಲಕರಾದ ದಿ. ಯಂ ರಾಮಕೃಷ್ಣ ರಾವ್ ಇವರ ಸಂಸ್ಮರಣೆ ಮತ್ತು ಸನ್ಮಾನ ಕಾರ್ಯಕ್ರಮ ದಿನಾಂಕ 25-09-2021ನೇ ಶನಿವಾರ ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಿತು.ದೀಪ ಪ್ರಜ್ವಲನೆ ಹಾಗೂ ರಾಮಕೃಷ್ಣ ರಾವ್ ಅವರ ಛಾಯಾ ಚಿತ್ರಕ್ಕೆ ಪುಷ್ಪಾರ್ಚನೆ ಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲರಾದ ಗೋಪಾಲಕೃಷ್ಣ ಭಟ್ ವಹಿಸಿದ್ದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದೈಗೊಳಿ ಸಾಯಿನಿಕೇತನ ಸೇವಾಶ್ರಮದ ವ್ಯವಸ್ಥಾಪಕರದ ಡಾ.ಉದಯಕುಮಾರ್ ನೂಜಿ,ಮೀಂಜ ಗ್ರಾಮ ಪಂಚಾಯತ್ ಆರೋಗ್ಯಾಧಿಕಾರಿ ಡಾ.ಪ್ರಭಾಕರ್ ರೈ ಹಾಗೂ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್. ವಿ ಆಗಮಿಸಿದ್ದರು.ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕಿ ರಾಜೇಶ್ವರಿ ಎಸ್.ರಾವ್ ,ಮೀಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ. ಆರ್ ಶೆಟ್ಟಿ ಹಾಗೂ ಉಪಾಧ್ಯಕ್ಷ ರಾದ ಜಯರಾಮ್.ಡಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ರಮೇಶ ಕೌಡೂರು ಇವರನ್ನು ಸನ್ಮಾನಿಸಲಾಯಿತು.ಶಾಲಾ ಅಧ್ಯಾಪಕಿ ಸೌಮ್ಯ.ಎನ್ ನಿರೂಪಿಸಿದ ಕಾರ್ಯಕ್ರಮವನ್ನು ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್ ರಾವ್ ಸ್ವಾಗತಿಸಿ,ಶಾಲಾ ಸ್ಟಾಫ್ ಸೆಕ್ರೆಟರಿ ಪದ್ಮಾವತಿ.ಎಂ ವಂದಿಸಿದರು.
Super👍
ReplyDelete