2022-23 ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

 ವಿದ್ಯಾವರ್ಧಕ ಎ. ಯು.ಪಿ ಶಾಲೆ ಮೀಯಪದವಿನಲ್ಲಿ ರಕ್ಷಕ- ಶಿಕ್ಷಕ ಸಂಘದ ಮಹಾಸಭೆ ಯಂ.ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಲಹೆಗಾರರದ ಶ್ರೀಧರ್ ರಾವ್ ಆರ್.ಎಂ ಮಾತನಾಡಿ ಶಾಲೆಯ ವ್ಯವಸ್ಥೆಯ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಶಾಲಾ ಪಿಟಿಎ ಉಪಾಧ್ಯಕ್ಷರಾದ ಸಿದ್ದಿಕ್ ಹಾಗೂ ಎಂ.ಪಿ.ಟಿ.ಎ ಅಧ್ಯಕ್ಷೆ ಸ್ವಪ್ನ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ 2022-23 ನೇ ಸಾಲಿನ  ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.ನೂತನ ಪಿಟಿಎ ಅಧ್ಯಕ್ಷರಾಗಿ ಕೃಷ್ಣ ಪ್ರಸಾದ್ ಪುನರಾಯ್ಕೆಗೊಂಡರು.ಉಪಾಧ್ಯಕ್ಷರಾಗಿ ಸಿದ್ದಿಕ್ ಹಾಗೂ ಉಮ್ಮರ್ ,ಎಂ.ಪಿ.ಟಿ.ಎ ಅಧ್ಯಕ್ಷೆಯಾಗಿ ಸೌಮ್ಯಪ್ರಕಾಶ್, ಉಪಾಧ್ಯಕ್ಷೆಯಾಗಿ ಸ್ವಪ್ನ ಹಾಗೂ ಸಾಜಿದ ಆಯ್ಕೆಗೊಂಡರು.ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕರಾದ ರಾಮಚಂದ್ರ.ಕೆ.ಎಂ ನಿರೂಪಿಸಿ,ಬಾಲಕೃಷ್ಣ.ಎಂ ವಂದಿಸಿದರು.









Comments